Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:15 - ಕನ್ನಡ ಸತ್ಯವೇದವು J.V. (BSI)

15 ಕೆಲವರು - ಇವನು ಎಲೀಯನೆಂತಲೂ ಕೆಲವರು - ಇವನು ಹಿಂದಿನ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇನ್ನು ಕೆಲವರು, “ಈತನು ಎಲೀಯನು,” ಎಂದರು. ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಉಲ್ಲೆ ಜಾನಾ “ತೊ ಎಲಿಯಾ ಮನ್ತಲೊ ಪ್ರವಾದಿ” ಮನುಲಾಗಲ್ಲ್ಯಾನಿ. ಅನಿ ಹುರಲ್ಲೆ “ತೊ ಅದ್ಲ್ಯಾ ಕಾಲಾತ್ಲ್ಯಾ ಪ್ರವಾದ್ಯಾಂಚ್ಯಾ ಬಾಸೆನ್ ಎಕ್ ಪ್ರವಾದಿ” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:15
19 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.


ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿ - ನಿಜವಾಗಿ ಈತನು ಬರಬೇಕಾದ ಪ್ರವಾದಿ ಅಂದರು;


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ನೀನು ಕ್ರಿಸ್ತನೂ ಎಲೀಯನೂ ಆ ಪ್ರವಾದಿಯೂ ಅಲ್ಲವಾದರೆ ಸ್ನಾನಮಾಡಿಸುವದೇನು? ಎಂದು ಅವನನ್ನು ಕೇಳಿದರು.


ಹಾಗಾದರೆ ನೀನು ಯಾರು? ಎಲೀಯನೋ? ಎಂದು ಅವರು ಕೇಳಲು ಅಲ್ಲವೆಂದನು. ನೀನು ಬರಬೇಕಾದ ಆ ಪ್ರವಾದಿಯೋ? ಅಂದದ್ದಕ್ಕೂ ಅಲ್ಲವೆಂದನು.


ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.


ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆಂದು ಕೆಲವರೂ ಹೇಳಿಕೊಳ್ಳುತ್ತಿದ್ದರು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.


ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು.


ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ - ನಾನು ತಲೆಹೊಯಿಸಿದ ಯೋಹಾನನೇ ತಿರಿಗಿ ಬದುಕಿ ಬಂದಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು