Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:21 - ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಆಕ್ರಿಕ್, ಹೆರೊದಿಯಾಸಾಕ್ ಎಕ್ ಬರೊ ಅವ್ಕಾಸ್ ಗಾವ್ಲೊ, ಹೆರೊದಾನ್ ಅಪ್ನಾಚ್ಯಾ ಜಲ್ಮಾಚ್ಯಾ ದಿಸಿ, ಅಪ್ನಾಚ್ಯಾ ರಾಜಾತ್ಲ್ಯಾ ಸಗ್ಳ್ಯಾ ಅದಿಕಾರ್‍ಯಾಕ್ನಿ, ಸೈನಿಕಾಂಚ್ಯಾ ಮುಖಂಡಾಕ್ನಿ ಅನಿ ಗಾಲಿಲಿಯಾಚ್ಯಾ ಮೊಟ್ಯಾ-ಮೊಟ್ಯಾ ಲೊಕಾಕ್ನಿ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:21
15 ತಿಳಿವುಗಳ ಹೋಲಿಕೆ  

ತನ್ನ ಎಲ್ಲಾ ಸರದಾರರಿಗೂ ಪರಿವಾರದವರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ರಾಜರಿಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ಅರಸನಾದ ಅಹಷ್ವೇರೋಷನ [ಆಳಿಕೆಯ] ಹನ್ನೆರಡನೆಯ ವರುಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿವಸವೂ ಯಾವವೆಂದು ತಿಳಿದುಕೊಳ್ಳುವದಕ್ಕೆ ಪೂರನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.


ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು