Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:3 - ಕನ್ನಡ ಸತ್ಯವೇದವು J.V. (BSI)

3 ಇವನು ಆ ಬಡಗಿಯಲ್ಲವೇ. ಇವನು ಮರಿಯಳ ಮಗನಲ್ಲವೇ. ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ. ಇವನ ತಂಗಿಯರು ಇಲ್ಲಿ ನಮ್ಮಲ್ಲಿ ಇದ್ದಾರಲ್ಲವೇ ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಮರಿಚೊ ಲೆಕ್ ಬಡಗಿ ನ್ಹಯ್ ಕಾಯ್ ಹ್ಯೊ? ಹೆಚೆ ಭಾವ್ ಜಾಕೊಬ್, ಜುಜೆ, ಜುದಾಸ್ ಅನಿ ಸಿಮಾವ್. ಹೆಚ್ಯಾ ಭೆನಿಯಾ ಹಿತ್ತೆಚ್ ರಾಯ್ನಾತ್ ಕಾಯ್?” ಅಶೆ ಮನುನ್ ತೆನಿ ಜೆಜುಕ್ ಅವ್ಮಾನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:3
21 ತಿಳಿವುಗಳ ಹೋಲಿಕೆ  

ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.


ಇವನ ತಂದೆತಾಯಿಗಳನ್ನು ನಾವು ಬಲ್ಲೆವಲ್ಲವೇ. ಈಗ ಇವನು ಪರಲೋಕದಿಂದ ಇಳಿದುಬಂದಿದ್ದೇನೆಂದು ಹೇಳುವದು ಹೇಗೆ? ಅಂದರು.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ.


ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು.


ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು.


ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;


ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ


ನನ್ನ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು ಎಂದು ಹೇಳಿದನು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಅನ್ನಪಾನಗಳಿಗೆ ನಮಗೆ ಹಕ್ಕಿಲ್ಲವೇ.


ಉಳಿದವರು ಯಾರಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,


ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಜನರು ಆತನಿಗೆ - ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿರುತ್ತಾರೆ ಎಂದು ಹೇಳಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು