Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:4 - ಕನ್ನಡ ಸತ್ಯವೇದವು J.V. (BSI)

4 ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುನ್ ತೆಂಕಾ “ದೆವಾಚ್ಯಾ ಗೊಸ್ಟಿಯಾ ಸಾಂಗ್ತಲ್ಯಾಕ್, ಅಪ್ನಾಚ್ಯಾ ಸ್ವತಾಚ್ಯಾ ಗಾಂವಾತ್, ಅಪ್ನಾಚ್ಯಾ ಲೊಕಾತ್ನಿ ಅನಿ ತೆಚಾ ಪಾವ್ನ್ಯಾ-ಸೊಯ್ರ್ಯಾತ್ನಿ ಸೊಡುನ್ ದುಸ್ರ್ಯಾಕ್ಡೆ ಲೈ ಮಾನ್ ಗಾವ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:4
6 ತಿಳಿವುಗಳ ಹೋಲಿಕೆ  

ಯಾಕಂದರೆ ಪ್ರವಾದಿಗೆ ಸ್ವದೇಶದಲ್ಲಿ ಮರ್ಯಾದೆಯಿಲ್ಲವೆಂದು ಯೇಸು ತಾನೇ ಹೇಳಿದನು.


ಆದರೆ ಯಾವ ಪ್ರವಾದಿಯೂ ಸ್ವದೇಶದಲ್ಲಿ ಸಮ್ಮತನಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಅಂದನು.


ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ -


ಆತನು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಶಿಷ್ಯರು ಆತನ ಹಿಂದೆಯೇ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು