Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:49 - ಕನ್ನಡ ಸತ್ಯವೇದವು J.V. (BSI)

49 ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಅವರೆಲ್ಲರೂ ಆತನನ್ನು ನೋಡಿ ತತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದರೆ ನೀರಿನ ಮೇಲೆ ನಡೆಯುತ್ತಿದ್ದ ಆತನನ್ನು ಕಂಡ ಶಿಷ್ಯರು ಆತನನ್ನು ಭೂತವೆಂದು ಭ್ರಮಿಸಿಕೊಂಡು ಭಯದಿಂದ ಕಿರುಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತೊ ಪಾನಿಯಾ ವರ್‍ತಿ ಚಲ್ತಲೆ ಬಗುನ್ ತೆನಿ “ಅಬಕ್ ಭುತ್!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:49
6 ತಿಳಿವುಗಳ ಹೋಲಿಕೆ  

ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು.


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲೋಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.


ಆತನು ಕೂಡಲೆ ಅವರನ್ನು ಮಾತಾಡಿಸಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು