Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:34 - ಕನ್ನಡ ಸತ್ಯವೇದವು J.V. (BSI)

34 ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಸರ್‍ಗಾಕ್ ದಿಸ್ಟ್ ಲಾವುನ್ ಉಸ್ಕಾರುನ್ “ಎಫ್ಫತಾ” ಮಟ್ಲ್ಯಾನ್ ಮಟ್ಲ್ಯಾರ್ ಉಗಡ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:34
21 ತಿಳಿವುಗಳ ಹೋಲಿಕೆ  

ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;


ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು - ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟು ಆ ಎರಡು ಮೀನುಗಳನ್ನೂ ಎಲ್ಲರಿಗೆ ಹಂಚಿಸಿದನು.


ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.


ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.


ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ -


ಮೂರು ಗಂಟೆಗೆ ಯೇಸು - ಎಲೋಹಿ, ಎಲೋಹಿ, ಲಮಾ ಸಬಕ್ತಾನೀ ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.


ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.


ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು.


ಯೇಸು ಕಣ್ಣೀರು ಬಿಟ್ಟನು.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು.


ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.


ನನಗೆ ಮನಸ್ಸುಂಟು; ಶುದ್ಧವಾಗು ಅಂದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಹೇಳುತ್ತಲೇ ಅವನ ಕಿವಿ ತೆರೆದವು; ಅವನ ನಾಲಿಗೆಯ ಕಟ್ಟು ಬಿಚ್ಚಿಹೋಯಿತು; ಅವನು ನೆಟ್ಟಗೆ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು