ಮಾರ್ಕ 7:6 - ಕನ್ನಡ ಸತ್ಯವೇದವು J.V. (BSI)6 ಅದಕ್ಕೆ ಆತನು - ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ - ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6-7 ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಜೆಜು ಕುಸ್ಡ್ಯಾ ಲೊಕಾನು, ಇಸಾಯಿಯಾನ್ ತುಮ್ಚ್ಯಾ ವಿಶಯಾತ್ ಹಿ ಲೊಕಾ ಅಪ್ನಾಚ್ಯಾ ತೊಂಡಾಂಚ್ಯಾ ಗೊಸ್ಟಿಯಾನಿ ಮಾಕಾ ಮಾನ್ ಕರ್‍ತ್ಯಾತ್, ಖರೆ ತೆಂಚಿ ಕಾಳ್ಜಾ ಮಾಜೆಕನ್ನಾ ಲೈ ದುರ್ ಹಾತ್, ಅಧ್ಯಾಯವನ್ನು ನೋಡಿ |