Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:7 - ಕನ್ನಡ ಸತ್ಯವೇದವು J.V. (BSI)

7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿತೋರಿಸುವದು ವ್ಯರ್ಥ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಮಾನ್ಸಾ ಮಾಜಿ ಭಜನ್ ಕರುನ್ ಕಾಯ್ ಫಾಯ್ದೊ, ಕಶ್ಯಾಕ್ ಮಟ್ಲ್ಯಾರ್ ದೆವಾಚೆ ಖಾಯ್ದೆ ಸೊಡುನ್ ಮಾನ್ಸಾನಿ ಕರಲ್ಲೆ ಖಾಯ್ದೆ ಹೆನಿ ಸಗ್ಳ್ಯಾಕ್ನಿ ಶಿಕ್ವುತ್ಯಾತ್.ಮನುನ್ ಸಾಂಗಲ್ಲೆ ಖರೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:7
15 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿ ತೋರಿಸುವದು ವ್ಯರ್ಥ ಎಂಬದೇ.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಅದನ್ನು ಮುಟ್ಟಬೇಡ ಎನ್ನುವ ನಿಬಂಧನೆಗಳಿಗೆ ನಿಮ್ಮನ್ನು ಒಳಗಾಗಮಾಡಿಕೊಳ್ಳುವದೇಕೆ? ಆ ಪದಾರ್ಥಗಳೆಲ್ಲವೂ ಬಳಸುವದರಲ್ಲಿ ನಾಶವಾಗುತ್ತವೆ.


ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.


ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?


ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವು ಹುರುಳಿಲ್ಲದ್ದು ಮತ್ತು ನಿಮ್ಮ ನಂಬಿಕೆಯೂ ಹುರುಳಿಲ್ಲದ್ದು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು