Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:9 - ಕನ್ನಡ ಸತ್ಯವೇದವು J.V. (BSI)

9 ಆತನು ಇನ್ನೂ ಅವರಿಗೆ - ನೀವು ನಿಮ್ಮ ಸಂಪ್ರದಾಯವನ್ನು ಹಿಡಿದು ನಡಿಸುವದಕ್ಕಾಗಿ ದೇವರ ಆಜ್ಞೆಯನ್ನು ವ್ಯರ್ಥಮಾಡುತ್ತೀರಿ; ಬಹು ಚೆನ್ನಾಗಿದೆಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಫಿಡೆ ಬೊಲುನ್ಗೆತ್ ಜೆಜುನ್ “ತುಮಿ ತುಮ್ಚೆ ಖಾಯ್ದೆ ಪಾಳು ಸಾಟ್ನಿ ದೆವಾಚೆ ಖಾಯ್ದೆ ತಿರಸ್ಕಾರ್ ಕರ್‍ತಲ್ಯಾತ್ ಉಶಾರ್ ಹಾಸಿ!”ಮಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:9
16 ತಿಳಿವುಗಳ ಹೋಲಿಕೆ  

ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು.


ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ಆತನನ್ನು - ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯದಂತೆ ಯಾಕೆ ನಡೆದುಕೊಳ್ಳುವದಿಲ್ಲ? ಮೈಲಿಗೆಯ ಕೈಯಿಂದ ಯಾಕೆ ಆಹಾರ ತೆಗೆದುಕೊಳ್ಳುತ್ತಾರೆ ಎಂದು ಕೇಳಿದರು.


ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.


ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು