ಮಾರ್ಕ 8:12 - ಕನ್ನಡ ಸತ್ಯವೇದವು J.V. (BSI)12 ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜು ಉಸ್ಕಾರ್ಲೊ ಅನಿ “ಹ್ಯಾ ಕಾಲಾಚಿ ಲೊಕಾ ವಳಕ್ ಕಶ್ಯಾಕ್ ಇಚಾರ್‍ತ್ಯಾತ್? ಮಿಯಾ ಖರೆಚ್ ಸಾಂಗ್ತಾ ಹ್ಯಾ ಲೊಕಾಕ್ನಿ ಘುರುತ್ ಕರುನ್ ದಾಕ್ವುಕ್ ಹೊಯ್ನಾ,” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |