Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:23 - ಕನ್ನಡ ಸತ್ಯವೇದವು J.V. (BSI)

23 ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತ್ಯಾ ಕುಡ್ಡ್ಯಾಕ್ ಹಾತ್ ಧರುನ್ ಗಾಂವಾಂಚ್ಯಾ ಭಾಯ್ರ್ ಘೆವ್ನ್ ಗೆಲ್ಯಾನ್ ಅನಿ ತೆಚ್ಯಾ ಡೊಳ್ಯಾ ವೈನಿ ಥುಕುನ್ ತೆಚ್ಯಾ ವರ್‍ತಿ ಹಾತ್ ಥವ್ಲ್ಯಾನ್, ಅನಿ “ಅತ್ತಾ ತುಕಾ ದಿಸುಕ್ ಲಾಗ್ಲಾ ಕಾಯ್ ನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:23
12 ತಿಳಿವುಗಳ ಹೋಲಿಕೆ  

ಆತನು ಅವನನ್ನು ಜನರ ಗುಂಪಿನಿಂದ ಒತ್ತಟ್ಟಿಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟು ಉಗುಳಿ


ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.


ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.


ಹೆತ್ತ ಮಕ್ಕಳಲ್ಲೆಲ್ಲಾ ಅವಳನ್ನು ಕರೆದುಕೊಂಡು ಹೋಗುವವನು ಯಾರೂ ಇಲ್ಲ; ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಅವನು ತಲೆಯೆತ್ತಿ ನೋಡಿ - ನನಗೆ ಜನರು ಕಾಣುತ್ತಾರೆ; ಅವರು ಮರಗಳಂತೆ ಕಾಣಿಸಿದರೂ ತಿರುಗಾಡುತ್ತಾ ಇದ್ದಾರೆ ಅಂದನು.


ತರುವಾಯ ಆತನು - ನೀನು ಊರೊಳಕ್ಕೇನೂ ಹೋಗಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ - ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು