ಮಾರ್ಕ 8:25 - ಕನ್ನಡ ಸತ್ಯವೇದವು J.V. (BSI)25 ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜೆಜುನ್ ಅನಿ ಎಗ್ದಾ ಅಪ್ಲೊ ಹಾತ್ ತೆಚ್ಯಾ ಡೊಳ್ಯಾಕ್ನಿ ಲಾವ್ಲ್ಯಾನ್. ತೆಕಾ ಬರೆ ದಿಸುಕ್ ಲಾಗ್ಲೆ ತೆಚೆ ಡೊಳೆ ಸಮಾ ಹೊಲೆ. ಅಧ್ಯಾಯವನ್ನು ನೋಡಿ |