Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:32 - ಕನ್ನಡ ಸತ್ಯವೇದವು J.V. (BSI)

32 ಆತನು ಈ ಮಾತನ್ನು ಏನೂ ಗುಂಬವಿಲ್ಲದೆ ಹೇಳಿದನು. ಆಗ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇದನ್ನು ಕೇಳಲಾಗದೇ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, “ತಾವು ಹೀಗೆಲ್ಲಾ ಹೇಳಬಾರದು,” ಎಂದು ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಫಿಡೆ ಅಪ್ನಾಕ್ ಕಾಯ್-ಕಾಯ್ ಹೊತಲೆ ಹಾಯ್ ತೆ ಸಗ್ಳೆ ನಿಪ್ವುನ್ ಥೈ ನಸ್ತಾನಾ ತೆನಿ ತೆಂಕಾ ಸಾಂಗಟ್ಲ್ಯಾನ್. ಹೆ ಆಯ್ಕುನ್ ಪೆದ್ರುನ್ ಜೆಜುಕ್ ಕಡೆಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅನಿ “ಹೆ ಸಗ್ಳೆ ತುಕಾ ಹೊತಲೆ ನಕ್ಕೊ” ಮನುನ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:32
9 ತಿಳಿವುಗಳ ಹೋಲಿಕೆ  

ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.


ಅದಕ್ಕೆ ಶಿಷ್ಯರು - ನೀನು ಹೇಳುವ ಸಂಗತಿಯನ್ನು ಈಗ ಗೂಢಾರ್ಥವಾಗಿ ಹೇಳದೆ ಸ್ಪಷ್ಟವಾಗಿ ಮಾತಾಡುತ್ತೀಯಲ್ಲಾ;


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ಆದರೆ ಮಾರ್ಥಳು ಬಹಳ ಸೇವೆಯ ವಿಷಯವಾಗಿ ಬೇಸತ್ತು ಆತನ ಬಳಿಗೆ ಬಂದು - ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.


ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು


ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.


ಆಗ ಯೇಸು ಸ್ಪಷ್ಟವಾಗಿ ಅವರಿಗೆ - ಲಾಜರನು ಸತ್ತುಹೋದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು