Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:35 - ಕನ್ನಡ ಸತ್ಯವೇದವು J.V. (BSI)

35 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಅಪ್ನಾಚೊ ಜಿವ್ ಹುರ್‍ವುನ್ ಘೆವ್ಕ್ ಬಗ್ತಾ, ತೊ ಕಳ್ದುನ್ ಘೆತಾ, ಅನಿ ಜೊ ಕೊನ್ ಮಾಜೆ ಸಾಟ್ನಿ ಅನಿ ದೆವಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಅಪ್ನಾಚೊ ಜಿವ್ ಕಳ್ದುನ್ ಘೆತಾ ತೊ ಅಪ್ನಾಚೊ ಜಿವ್ ಹುರ್‍ವುನ್ ಘೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:35
27 ತಿಳಿವುಗಳ ಹೋಲಿಕೆ  

ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ತನ್ನ ಪ್ರಾಣವನ್ನು ದೊರಕಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಪ್ರಾಣವನ್ನು ಕಳಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು?


ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು