Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:38 - ಕನ್ನಡ ಸತ್ಯವೇದವು J.V. (BSI)

38 ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಹ್ಯಾ ಬುರ್ಶ್ಯಾ ಅನಿ ಪಾಪಿ ದಿಸಾತ್ನಿ, ಕೊನ್ ತರ್ ಎಕ್ಲೊ ಮಾನುಸ್ ಮಿಯಾ ಸಾಂಗಲ್ಲ್ಯಾ ಬರ್‍ಯಾ ಗೊಸ್ಟಿಯಾಂಚ್ಯಾಸಾಟಿ ನಾಜಾಲ್ಯಾರ್ ಮಾಜೆಸಾಟಿ ಲಜ್ತಾ ಹೊಲ್ಯಾರ್ ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ತನ್ನಾ ತೆಚೆಸಾಟ್ನಿ ಲಜ್ತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:38
44 ತಿಳಿವುಗಳ ಹೋಲಿಕೆ  

ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ತಾನು ದೇವರ ಮಗನಿಗೆ ಸೇರಿದವನಲ್ಲವೆನ್ನುವವನು ತಂದೆಗೆ ಸೇರಿದವನಲ್ಲ; ತಾನು ಮಗನಿಗೆ ಸೇರಿದವನೆಂದು ಒಪ್ಪಿಕೊಳ್ಳುವವನು ತಂದೆಗೂ ಸೇರಿದವನಾಗಿದ್ದಾನೆ.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.


ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ;


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಡಬಹುದು?


ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು