Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:4 - ಕನ್ನಡ ಸತ್ಯವೇದವು J.V. (BSI)

4 ಶಿಷ್ಯರು - ಈ ಅಡವಿಯಲ್ಲಿ ಎಲ್ಲಿಂದ ರೊಟ್ಟಿಯನ್ನು ತಂದು ಈ ಜನರನ್ನು ತೃಪ್ತಿಪಡಿಸುವದಕ್ಕಾದೀತು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಶಿಷ್ಯರು, “ಇಲ್ಲಿಗೆ ಯಾವ ಊರೂ ಸಮೀಪದಲ್ಲಿಲ್ಲ. ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರಲು ಸಾದ್ಯ?” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಶಿಷ್ಯರು ಯೇಸುವಿಗೆ, “ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಶಿಸಾನಿ “ಹಿತ್ತೆ ಜಗ್ಗೊಳ್ ಎಕ್‍ಬಿ ಗಾಂವ್ ನಾ ಕಾಯ್ನಾ, ಎವ್ಡ್ಯಾ ಸಗ್ಳ್ಯಾ ಲೊಕಾಕ್ನಿ ಫಿರೆ ಹೊಯ್ಸರ್ಕ್ಯಾ ಭಾಕ್ರಿಯಾ ಖೈತ್ನಾ ಹಾನ್ತಲ್ಯಾ ಅತ್ತಾ?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:4
10 ತಿಳಿವುಗಳ ಹೋಲಿಕೆ  

ಯಾಕಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಲಿಲ್ಲ; ಅವರ ಮನಸ್ಸು ಕಲ್ಲಾಗಿತ್ತು.


ಶಿಷ್ಯರು - ಇಷ್ಟು ಜನರನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿ ಈ ಅಡವಿಯಲ್ಲಿ ನಮಗೆ ಎಲ್ಲಿಂದ ಬಂದೀತು? ಅನ್ನಲು


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಇವರನ್ನು ಉಪವಾಸವಾಗಿ ಮನೆಗೆ ಕಳುಹಿಸಿಬಿಟ್ಟರೆ ದಾರಿಯಲ್ಲಿ ಬಳಲಿಹೋಗುವರು; ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ ಎಂದು ಅವರಿಗೆ ಹೇಳಿದ್ದಕ್ಕೆ


ಆತನು - ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಅವರನ್ನು ಕೇಳಿದ್ದಕ್ಕೆ ಅವರು - ಏಳು ಅವೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು