Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:6 - ಕನ್ನಡ ಸತ್ಯವೇದವು J.V. (BSI)

6 ಆಗ ಆತನು ಜನರ ಗುಂಪಿಗೆ - ನೆಲದ ಮೇಲೆ ಕೂತುಕೊಳ್ಳಿರಿ ಎಂದು ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಹಂಚುವದಕ್ಕೆ ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಆ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಹೇಳಿದನು. ನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ ಅವುಗಳನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟು, ಅವುಗಳನ್ನು ಜನರಿಗೆ ಹಂಚಬೇಕೆಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜುನ್ ಸಗ್ಳ್ಯಾ ಲೊಕಾಕ್ನಿ ಬಸಾ ಮನುನ್ ಸಾಂಗ್ಲ್ಯಾನ್. ಮಾನಾ ತ್ಯಾ ಸಾತ್ ಭಾಕ್ರಿಯಾ ಹಾತಿತ್ ಘೆಟ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿಲ್ಯಾನ್ ಅನಿ ಭಾಕ್ರಿಯಾ ಮೊಡುನ್ ಲೊಕಾಕ್ನಿ ವಾಟಾ ಮನುನ್ ಅಪ್ಲ್ಯಾ ಶಿಸಾಂಚ್ಯಾಕ್ಡೆ ದಿಲ್ಯಾನ್, ಶಿಸಾನಿ ಸಗ್ಳ್ಯಾ ಲೊಕಾಕ್ನಿ ವಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:6
18 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ಆತನು ಅವರ ಸಂಗಡ ಊಟಕ್ಕೆ ಕೂತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿ ಹೋಗುವವರೆಗೆ ಜನರು ಊಟಮಾಡುವದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ; ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ; ಅವನು ಸಿಕ್ಕುವ ಸಮಯ ಇದೇ ಅಂದರು.


ಆತನು - ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಅವರನ್ನು ಕೇಳಿದ್ದಕ್ಕೆ ಅವರು - ಏಳು ಅವೆ ಅಂದರು.


ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ - ಇವುಗಳನ್ನೂ ಹಂಚಿಕೊಡಿರಿ ಅಂದನು.


ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ತುಂಡು ತುಂಬಿದ ಎಷ್ಟು ಹೆಡಿಗೆಗಳನ್ನು ತೆಗೆದುಕೊಂಡು ಹೋದಿರಿ ಎಂದು ಕೇಳಿದ್ದಕ್ಕೆ ಅವರು - ಏಳು ಹೆಡಿಗೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು