Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:7 - ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ - ಇವುಗಳನ್ನೂ ಹಂಚಿಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಿಷ್ಯರ ಬಳಿ ಕೆಲವು ಸಣ್ಣ ಮೀನುಗಳೂ ಇದ್ದವು. ಯೇಸು ಆ ಮೀನುಗಳಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಅವುಗಳನ್ನೂ ಜನರಿಗೆ ಕೊಡಬೇಕೆಂದು ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾಕ್ಡೆ ಉಲ್ಲ್ಯಾ ಬಾರಿಕ್ಲ್ಯಾ ಮಾಸೊಳ್ಯಾಬಿ ಹೊತ್ತ್ಯಾ, ತ್ಯಾ ಮಾಸೊಳ್ಯಾಬಿ ಜೆಜುನ್ ಅಪ್ಲ್ಯಾ ಹಾತಿತ್ ಘೆವ್ನ್ ಧನ್ಯಾವಾದ್ ದಿವ್ನ್ ಲೊಕಾಕ್ನಿ ವಾಟಾ ಮನುನ್ ಶಿಸಾಂಚ್ಯಾ ಹಾತಾತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:7
6 ತಿಳಿವುಗಳ ಹೋಲಿಕೆ  

ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.


ಆಗ ಯೇಸು ಅವರನ್ನು - ಮಕ್ಕಳಿರಾ, ಊಟಕ್ಕೆ ನಿಮಗೆ ಏನೂ ಇಲ್ಲವೇ ಎಂದು ಕೇಳಲು ಅವರು ಇಲ್ಲವೆಂದು ಉತ್ತರಕೊಟ್ಟರು.


ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?


ಆಗ ಆತನು ಜನರ ಗುಂಪಿಗೆ - ನೆಲದ ಮೇಲೆ ಕೂತುಕೊಳ್ಳಿರಿ ಎಂದು ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಹಂಚುವದಕ್ಕೆ ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು