Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:1 - ಕನ್ನಡ ಸತ್ಯವೇದವು J.V. (BSI)

1 ಮತ್ತು ಅವರಿಗೆ - ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬಂದಿರುವದನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅನಿ ತೆನಿ “ಮಿಯಾ ತುಮ್ಕಾ ಸಾಂಗ್ತಾ ತುಮ್ಚ್ಯಾ ಮದ್ಲೆ ಉಲ್ಲೆ ಜಾನಾ ದೆವಾಚೆ ರಾಜ್ ಅಪ್ನಾಚ್ಯಾ ಅದಿಕಾರಾ ಸಮೆತ್ ಯೆತಲೆ ಬಗ್ಲ್ಯಾ ಸಿವಾಯ್ ಮರಿನ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:1
13 ತಿಳಿವುಗಳ ಹೋಲಿಕೆ  

ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಅಂದನು.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು