Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:2 - ಕನ್ನಡ ಸತ್ಯವೇದವು J.V. (BSI)

2 ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸಾ ದಿಸ್ ಹೊಲ್ಲ್ಯಾ ಮಾನಾ, ಜೆಜು ಪೆದ್ರುಕ್, ಜಾಕೊಬಾಕ್ ಅನಿ ಜುವಾಂವಾಕ್ ಬಲ್ವುನ್ ಘೆವ್ನ್, ಎಕ್ ಮಡ್ಡಿ ವರ್‍ತಿ ಗೆಲೊ. ಥೈ ತೆನಿ ಎವ್ಡೆಚ್ ಹೊತ್ತೆ. ತೆನಿ ಜೆಜು ವರ್‍ತಿ ನದರ್ ಮಾರುನ್ ಬಗಟಲ್ಲ್ಯಾನಿ ತನ್ನಾ ತೆಚೆ ವರ್‍ತಿ ಹೊಲ್ಲಿ ಬದ್ಲಾವನ್ ತೆಂಕಾ ದಿಸ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:2
23 ತಿಳಿವುಗಳ ಹೋಲಿಕೆ  

ನೀವು ಭೂಷಿತರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ಕಣ್ಣು ತುಂಬಾ ನೋಡುವಿರಿ.


ಮತ್ತು ಆತನು ಪೇತ್ರ, ಯಾಕೋಬ, ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರಗೊಡಲಿಲ್ಲ.


ಬೆಚ್ಚಿಬೆರಗಾಗಿ ಮನಗುಂದಿದವನಾದನು.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಒಂದು ಹಳ್ಳಿಗೆ ನಡಕೊಂಡು ಹೋಗುತ್ತಿದ್ದಾಗ ಆತನು ಅವರಿಗೆ ರೂಪಾಂತರದಿಂದ ಕಾಣಿಸಿಕೊಂಡನು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು.


ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು