ಮಾರ್ಕ 9:31 - ಕನ್ನಡ ಸತ್ಯವೇದವು J.V. (BSI)31 ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಕಶ್ಯಾಕ್ ಮಟ್ಲ್ಯಾರ್ ತೊ ಶಿಸಾಕ್ನಿ ಶಿಕ್ವುಲಾಗಲ್ಲೊ. ತನ್ನಾ ಜೆಜುನ್ “ಮಾನ್ಸಾಚ್ಯಾ ಲೆಕಾಕ್ ಧರುನ್ ಲೊಕಾಂಚ್ಯಾ ಹಾತಾತ್ ದಿತ್ಯಾತ್, ಅನಿ ತಿ ಲೊಕಾ ತೆಕಾ ಜಿವಾನಿ ಮಾರ್‍ತ್ಯಾತ್, ಜಾಲ್ಯಾರ್‍ಬಿ ತಿನ್ವ್ಯಾ ದಿಸಿ ತೊ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟುನ್ ಯೆತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |