Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:35 - ಕನ್ನಡ ಸತ್ಯವೇದವು J.V. (BSI)

35 ಆತನು ಕೂತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ - ಯಾವನಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಆಳೂ ಆಗಿರಬೇಕು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನೂ ಕರೆದು, ಅವರಿಗೆ, ‘ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಜು ಬಸ್ಲೊ ಅನಿ ಬಾರಾ ಜಾನಾಕ್ನಿಬಿ ಅಪ್ನಾಕ್ಡೆ ಬಲ್ವುನ್ “ತುಮ್ಚ್ಯಾ ಮದ್ದಿ ಕೊನಾಕ್ ಮೊಟೊ ಮನುನ್ ಘೆವ್ಕ್ ಮನ್ ಹಾಯ್, ತೊ ಹುರಲ್ಲೆ ಸಗ್ಳೆ ಜಾನಾ ಅಪ್ನಾಚ್ಯಾನ್ಕಿ ಮೊಟೆ ಮನುನ್ ಯೌಜುಕ್ ಪಾಜೆ, ಅನಿ ತೆಂಚೊ ಸೆವಕ್ ಹೊವ್ಚೊ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:35
10 ತಿಳಿವುಗಳ ಹೋಲಿಕೆ  

ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.


ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ನಡುವೆ ನಿಲ್ಲಿಸಿ ಅಪ್ಪಿಕೊಂಡು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು