ಮಾರ್ಕ 9:38 - ಕನ್ನಡ ಸತ್ಯವೇದವು J.V. (BSI)38 ಯೋಹಾನನು ಆತನಿಗೆ - ಬೋಧಕನೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಲಾಗಿ ಯೇಸು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯೊವಾನ್ನನು ಯೇಸುಸ್ವಾಮಿಗೆ, “ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲ. ಆದಕಾರಣ ಅವನನ್ನು ತಡೆದೆವು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಜುವಾಂವಾನ್ ಜೆಜುಕ್ “ಗುರುಜಿ, ಕೊನ್ಕಿ ಎಕ್ಲೊ ತುಜ್ಯಾ ನಾವಾನ್ ಗಿರೆ ಕಾಡ್ತಲೆ ಅಮಿ ಬಗಟ್ಲಾವ್, ತೊ ಅಮ್ಚೊ ಮಾನುಸ್ ನ್ಹಯ್, ತಸೆ ಮನುನ್ ತುಜೆ ನಾವ್ ಘೆವ್ನ್ ಹೆ ಸಗ್ಳೆ ಕರುನಕೊ ಮನುನ್ ಅಮಿ ತೆಕಾ ಸಾಂಗ್ಲಾಂವ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |