Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:4 - ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಎಲೀಯನೂ ಮೋಶೆಯೂ ಅವರಿಗೆ ಕಾಣಿಸಿಕೊಂಡು ಯೇಸುವಿನ ಸಂಗಡ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಮೋಶೆ ಮತ್ತು ಎಲೀಯ ಅಲ್ಲಿ ಪ್ರತ್ಯಕ್ಷರಾಗಿ ಯೇಸುವಿನೊಂದಿಗೆ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಎಲಿಯಾ ಅನಿ ಮೊಯ್ಜೆ ಜೆಜುಕ್ಡೆ ಬೊಲ್ತಲೆ ತಿನಿಬಿ ಶಿಸಾನಿ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:4
15 ತಿಳಿವುಗಳ ಹೋಲಿಕೆ  

ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.


ಪ್ರವಾದಿಗಳೆಲ್ಲರೂ ಧರ್ಮಶಾಸ್ತ್ರವೂ ಪ್ರವಾದಿಸುವದು ಯೋಹಾನನ ತನಕ ಇತ್ತು.


ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು.


ಆಗ ಪೇತ್ರನು ಯೇಸುವಿಗೆ - ಗುರುವೇ, ನಾವು ಇಲ್ಲೇ ಇರುವದು ಒಳ್ಳೇದು; ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು