ಮಾರ್ಕ 9:41 - ಕನ್ನಡ ಸತ್ಯವೇದವು J.V. (BSI)41 ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ತುಮಿ ಮಾಜ್ಯೆ ಮನುನ್ ಕಳುನ್, ಕೊನ್ ತರ್ ತುಮ್ಕಾ ಎಕ್ ತಾಂಬ್ಯಾ ಪಾನಿ ದಿಲ್ಯಾರ್ಬಿ, ತೆಂಕಾ ತೆಚೊ ಪ್ರತಿಫಳ್ ಖರೆಚ್ ವಾವುನುಚ್ ಗಾವ್ತಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |