Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:43 - ಕನ್ನಡ ಸತ್ಯವೇದವು J.V. (BSI)

43 ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43-44 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತುಜೊ ಹಾತ್ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡುನ್ ಸೊಡ್, ದೊನ್ ಹಾತಾ ಘೆವ್ನ್ ಕನ್ನಾಚ್ ಇಜಿನಸಲ್ಲಿ ಆಗ್ ಹೊತ್ತ್ಯಾ ನರ್ಕಾತ್ ಜಾತಲ್ಯಾಚ್ಯಾನ್ಕಿ, ಎಕ್ ಹಾತ್ ನಸ್ತಾನಾ ನಿರಂತರ್ ಜಿವನಾಕ್ ಜಾತಲೆ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:43
23 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.


ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೇಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು ಊನವಾದವರು ಕುರುಡರು ಕುಂಟರು ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.


ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು.


ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು