Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:9 - ಕನ್ನಡ ಸತ್ಯವೇದವು J.V. (BSI)

9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ - ನೀವು ಕಂಡಿರುವದನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎದ್ದು ಬರುವತನಕ ಯಾರಿಗೂ ತಿಳಿಸಬಾರದೆಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಮಡ್ಡಿ ವೈಯ್ನಾ ಉತ್ರುನ್ ಯೆತಾನಾ “ಮಾನ್ಸಾಚೊ ಲೆಕ್ ಮರುನ್, ಅನಿ ಪರ್ತುನ್ ಝಿತ್ತೊ ಹೊವ್ನ್ ಉಟುನ್ ಯೆಯ್ ಪತರ್ ತುಮಿ ಮಡ್ಡಿ ವರ್‍ತಿ ಬಗಟಲ್ಲೆ ಕೊನಾಕ್ಬಿ ಸಾಂಗುನಕಾಸಿ” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:9
15 ತಿಳಿವುಗಳ ಹೋಲಿಕೆ  

ಅವರು ಬಹಳ ಆಶ್ಚರ್ಯದಿಂದ ಬೆರಗಾದರು. ಆಮೇಲೆ ಆತನು ಅವರಿಗೆ - ಇದು ಯಾರಿಗೂ ತಿಳಿಯಬಾರದೆಂದು ಬಹು ಖಂಡಿತವಾಗಿ ಹೇಳಿ ಆ ಹುಡುಗಿಗೆ ಊಟಮಾಡಿಸಿರಿ ಅಂದನು.


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಆಗ ಆತನು - ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಹಬ್ಬಿಸಿದರು.


ಫಕ್ಕನೆ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಆಗಿನಿಂದ ಮತ್ತಾರನ್ನೂ ಕಾಣಲಿಲ್ಲ.


ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳೊಳಗೆ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು