ಮೀಕ 1:1 - ಕನ್ನಡ ಸತ್ಯವೇದವು J.V. (BSI)1 ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ. ಅಧ್ಯಾಯವನ್ನು ನೋಡಿ |