Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:13 - ಕನ್ನಡ ಸತ್ಯವೇದವು J.V. (BSI)

13 ಲಾಕೀಷಿನವರೇ, ಅಶ್ವಗಳನ್ನು ರಥಕ್ಕೆ ಕಟ್ಟಿರಿ; ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ; ಹೌದು, ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:13
27 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಇದಾದ ಮೇಲೆ ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇವಿುಗೆ ಕಳುಹಿಸಿ ಅವರಿಂದ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇವಿುನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ -


ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ -


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಇದಕ್ಕೆಲ್ಲಾ ಕಾರಣವು ಯಾಕೋಬಿನ ದ್ರೋಹವೇ, ಇಸ್ರಾಯೇಲ್ ವಂಶದ ಪಾಪಗಳೇ, ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ. ಯೆಹೂದದ [ಕೆಟ್ಟ] ಪೂಜಾಸ್ಥಾನಗಳು ಯಾವವು? ಯೆರೊಸಲೇಮಲ್ಲವೇ.


ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು ಅಕ್ಕನ ಸೂಳೆತನಕ್ಕಿಂತ ಹೆಚ್ಚಾದ ಸೂಳೆತನವನ್ನು ನಡಿಸಿ ಅವಳನ್ನು ಮೀರಿ ಬಲುಕೆಟ್ಟವಳಾದಳು.


ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.


ಅನಾತೋತೇ, ಪ್ರತಿಧ್ವನಿ ಕೊಡು! ಮದ್ಮೇನ ದಿಕ್ಕಾಪಾಲಾಯಿತು; ಗೇಬೀವಿುನ ನಿವಾಸಿಗಳು ವಲಸೆಹೋದರು;


ಮಾರೇಷ, ಜೀಫ್, ಅದೋರೈಮ್, ಲಾಕೀಷ್,


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ವಿುಚ್ವೆ, ಯೊಕ್ತೇಲ್, ಲಾಕೀಷ್, ಬೊಚ್ಕತ್,


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.


ಇದಲ್ಲದೆ ಅವರು ರಥಾಶ್ವಗಳಿಗೋಸ್ಕರವೂ ಸವಾರಿಕುದುರೆಗಳಿಗೋಸ್ಕರವೂ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದೊಪ್ಪಿಸುತ್ತಿದ್ದರು.


ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.


ನೇಗಿಲಸಾಲಿಗೆ ತಪ್ಪದಂತೆ ಅದನ್ನು ಹಗ್ಗದಿಂದ ಕಟ್ಟುವಿಯಾ? ಅದು ತಗ್ಗಿನ ಭೂವಿುಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವದೋ?


ಬಾಬೆಲಿನ ಅರಸನ ಸೈನ್ಯವು ಯೆರೂಸಲೇವಿುಗೂ ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಿಗಾಗಿ ಉಳಿದಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು