ಮೀಕ 1:2 - ಕನ್ನಡ ಸತ್ಯವೇದವು J.V. (BSI)2 ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು. ಅಧ್ಯಾಯವನ್ನು ನೋಡಿ |