Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:1 - ಕನ್ನಡ ಸತ್ಯವೇದವು J.V. (BSI)

1 ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:1
40 ತಿಳಿವುಗಳ ಹೋಲಿಕೆ  

ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಕಳ್ಳನ ಸಲಕರಣೆಗಳು ಕೆಟ್ಟವುಗಳೇ; ದೀನದರಿದ್ರರು ನ್ಯಾಯವಾದಿಗಳಾಗಿದ್ದರೂ ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


[ನಿನೆವೆಯೇ,] ಯೆಹೋವನಿಗೆ ವಿರುದ್ಧವಾಗಿ ದುರಾಲೋಚನೆಮಾಡಿ ಕೇಡನ್ನು ಸಂಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.


ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.


ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ - ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥಮಾಡಿಕೊಂಡರು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ.


ಆದದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಮರ್ಶೆಮಾಡಬೇಕೆಂದು ನೆವಹೇಳಿ ಅವನನ್ನು ಕೋಟೆಯಿಂದ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ ಅವನು ಹತ್ತರ ಬರುವದಕ್ಕಿಂತ ಮುಂಚೆಯೇ ಅವನನ್ನು ಕೊಲ್ಲುವದಕ್ಕೆ ಸಿದ್ಧವಾಗಿದ್ದೇವೆ ಅಂದರು.


ಯೆಹೋವನು ಒಳ್ಳೆಯವನಿಗೆ ದಯೆಮಾಡುವನು; ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.


ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಅಲ್ಲಿ ಆತನು ನನಗೆ - ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


(ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. )


ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.


ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು ರಾತ್ರಿಯಲ್ಲಿ ಕಳ್ಳನಂತಿರುವನು.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,


ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು;


ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.


ಒಬ್ಬರಿಗೊಬ್ಬರು ಪ್ರೀತಿ ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರ, ಇವರಾರಿಗೂ ಅನ್ಯಾಯ ಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ,


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು


ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ಕಲ್ಪಿಸುವದು ಮೋಸವೇ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ದುಷ್ಟರು ಜನ್ಮದಿಂದಲೇ ಧರ್ಮ ಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ಬಿಟ್ಟವರು.


ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ;


ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು