Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:10 - ಕನ್ನಡ ಸತ್ಯವೇದವು J.V. (BSI)

10 ಏಳಿರಿ, ತೊಲಗಿರಿ! ಈ ದೇಶವು ನಿಮಗೆ ಸುಖ ವಸತಿಯಾಗದು; ನಾಶನವನ್ನು, ವಿಪರೀತನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:10
20 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ ತಮ್ಮ ಮಕ್ಕಳ ನಿರಪರಾಧರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ಆದದರಿಂದ ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.


ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.


ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಹೊಲೆಗೈದರು; ಅವರ ನಡತೆಯು ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಜನಾಂಗಗಳೊಳಗೆ ಅವರನ್ನು ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು