Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:3 - ಕನ್ನಡ ಸತ್ಯವೇದವು J.V. (BSI)

3 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:3
29 ತಿಳಿವುಗಳ ಹೋಲಿಕೆ  

ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.


ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಆತನ ಕೈ ನನ್ನ ದ್ರೋಹಗಳನ್ನು ನೊಗದ ಕಣ್ಣಿಗಳನ್ನೋ ಎಂಬಂತೆ ನನಗೆ ಬಿಗಿದಿದೆ. ಅವು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು - ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು