ಮೀಕ 2:4 - ಕನ್ನಡ ಸತ್ಯವೇದವು J.V. (BSI)4 ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಪದ್ಯವನ್ನೆತ್ತಿ - ಅಯ್ಯೋ, ನಾವು ತೀರಾ ಸೂರೆ ಹೋದೆವಲ್ಲಾ! [ಯೆಹೋವನು] ನಮ್ಮವರ ಸ್ವಾಸ್ತ್ಯವನ್ನು ಪರಾಧೀನಮಾಡಿದ್ದಾನೆ; ಅಕಟಾ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ! ನಮ್ಮ ಭೂವಿುಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ ಎಂದು ಶೋಕಗೀತವಾಗಿ ಹಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು. ಅಧ್ಯಾಯವನ್ನು ನೋಡಿ |