ಮೀಕ 2:9 - ಕನ್ನಡ ಸತ್ಯವೇದವು J.V. (BSI)9 ನನ್ನ ಜನರ ಸ್ತ್ರೀಯರನ್ನು ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಮಹಿಮೆಯ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಆಶೀರ್ವಾದದ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಜನರು ಸ್ತ್ರೀಯರ ಕೈಯಿಂದ ಅಂದವಾದ ಮನೆಗಳನ್ನು ಕಿತ್ತುಕೊಂಡಿದ್ದೀರಿ; ಅವರ ಚಿಕ್ಕಮಕ್ಕಳಿಂದ ನನ್ನ ಐಶ್ವರ್ಯವನ್ನು ನಿರಂತರಕ್ಕೂ ಕಿತ್ತುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.