Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:1 - ಕನ್ನಡ ಸತ್ಯವೇದವು J.V. (BSI)

1 ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:1
21 ತಿಳಿವುಗಳ ಹೋಲಿಕೆ  

ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.


ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದೆಯುತ್ತೀರಿ, ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವದಿಲ್ಲ.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು