ಮೀಕ 3:11 - ಕನ್ನಡ ಸತ್ಯವೇದವು J.V. (BSI)11 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ. ಅಧ್ಯಾಯವನ್ನು ನೋಡಿ |