Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:2 - ಕನ್ನಡ ಸತ್ಯವೇದವು J.V. (BSI)

2 ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:2
32 ತಿಳಿವುಗಳ ಹೋಲಿಕೆ  

ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ದುಷ್ಟತ್ವವನ್ನು ನಡಿಸುವವರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ದೇವರನ್ನು ಸ್ಮರಿಸುವದಿಲ್ಲ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ದೇವಭಯವಿಲ್ಲದವರೂ ಮಮತೆಯಿಲ್ಲದವರೂ ಸಮಾಧಾನವಾಗದವರೂ ಚಾಡಿಹೇಳುವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೇದನ್ನು ಪ್ರೀತಿಸದವರೂ


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಅದಕ್ಕೆ ಅವರು - ಇವನನ್ನು ಬೇಡ, ಬರಬ್ಬನನ್ನು ಬಿಟ್ಟುಕೊಡಬೇಕು ಎಂದು ತಿರಿಗಿ ಕೂಗಿ ಹೇಳಿದರು. ಈ ಬರಬ್ಬನು ಕಳ್ಳನಾಗಿದ್ದನು.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು.


ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದೆಯುತ್ತೀರಿ, ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವದಿಲ್ಲ.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.


ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವು ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.


ಮಾಂಸಖಂಡಗಳನ್ನು ಅಂದರೆ ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.


ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ; ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿಬರುವವರ ಅಂಗಿಯ ಮೇಲಿನಿಂದ ಶಲ್ಯವನ್ನು ಕಸುಕೊಳ್ಳುತ್ತೀರಿ.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು