ಮೀಕ 3:5 - ಕನ್ನಡ ಸತ್ಯವೇದವು J.V. (BSI)5 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು. ಅಧ್ಯಾಯವನ್ನು ನೋಡಿ |