ಮೀಕ 3:8 - ಕನ್ನಡ ಸತ್ಯವೇದವು J.V. (BSI)8 ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. ಅಧ್ಯಾಯವನ್ನು ನೋಡಿ |