ಮೀಕ 4:1 - ಕನ್ನಡ ಸತ್ಯವೇದವು J.V. (BSI)1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.