Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:11 - ಕನ್ನಡ ಸತ್ಯವೇದವು J.V. (BSI)

11 [ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:11
15 ತಿಳಿವುಗಳ ಹೋಲಿಕೆ  

ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ


ಚೀಯೋನನ್ನು ದ್ವೇಷಿಸುವವರೆಲ್ಲರು ಅವಮಾನದಿಂದ ಹಿಂದಿರುಗಲಿ.


ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ, ಮಾಯವಾಗುವದು.


ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹುವರುಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಾಯೇಲ್ಯರ ಮೇಲೆ ಬೀಳಮಾಡುವೆನು ಎಂದು ಮುಂತಿಳಿಸಿದ್ದರಷ್ಟೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು