ಮೀಕ 4:12 - ಕನ್ನಡ ಸತ್ಯವೇದವು J.V. (BSI)12 ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು. ಅಧ್ಯಾಯವನ್ನು ನೋಡಿ |