ಮೀಕ 4:13 - ಕನ್ನಡ ಸತ್ಯವೇದವು J.V. (BSI)13 ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು. ಅಧ್ಯಾಯವನ್ನು ನೋಡಿ |