ಮೀಕ 4:4 - ಕನ್ನಡ ಸತ್ಯವೇದವು J.V. (BSI)4 ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿ |