Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು‍ ಒಂದಾಗಿ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮು ಗಾಯಗೊಂಡು ಕುಂಟಾಗಿದೆ; ತಳ್ಳಲ್ಪಟ್ಟಿದೆ; ಗಾಯಗೊಂಡು ಶಿಕ್ಷಿಸಲ್ಪಟ್ಟಿದೆ. ಆದರೆ ನಾನು ಆಕೆಯನ್ನು ನನ್ನ ಬಳಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ ಒಂದಾಗಿ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:6
16 ತಿಳಿವುಗಳ ಹೋಲಿಕೆ  

ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು