ಮೀಕ 4:8 - ಕನ್ನಡ ಸತ್ಯವೇದವು J.V. (BSI)8 ಹಿಂಡಿಗೆ ರಕ್ಷಕವಾದ ಹೂಡೆಯೇ, ಚೀಯೋನ್ ಯುವತಿಯ ಗುಡ್ಡವೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವದು, ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.” ಅಧ್ಯಾಯವನ್ನು ನೋಡಿ |