13 ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು. ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನು ನೀನು ಆರಾಧಿಸದಂತೆ ಮಾಡುವೆನು.
ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.
ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.
ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.