ಮೀಕ 5:2 - ಕನ್ನಡ ಸತ್ಯವೇದವು J.V. (BSI)2 ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು. ಅಧ್ಯಾಯವನ್ನು ನೋಡಿ |