Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:7
40 ತಿಳಿವುಗಳ ಹೋಲಿಕೆ  

ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಒಡೆಯುವದು; ಲೆಬನೋನಿನ [ದೇವದಾರುಗಳ] ಹಾಗೆ ಬೇರುಬಿಟ್ಟುಕೊಳ್ಳುವದು.


ಹುಲ್ಲು ಕೊಯಿದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ ಭೂವಿುಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.


ಅವರು ಬಿದ್ದುಹೋದದ್ದು ಸರ್ವಲೋಕದ ಭಾಗ್ಯಕ್ಕೂ ಅವರು ಸೋತು ಹೋದದ್ದು ಅನ್ಯಜನಗಳ ಭಾಗ್ಯಕ್ಕೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಎಷ್ಟೋ ಹೆಚ್ಚಾಗಿ ಭಾಗ್ಯಕ್ಕೆ ಕಾರಣವಾಗುವದು.


ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ನಾನು ಮಾತಾಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮ ವರವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಮತ್ತು ಗಿದ್ಯೋನನು ದೇವರಿಗೆ - ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬದನ್ನು ತಿಳಿಯಪಡಿಸು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ.


ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಇಬ್ಬನಿಯು ನೆಲದ ಮೇಲೆ ಹೇಗೋ ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇದು ಯೆರೂಸಲೇಮು; ಆ ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.


ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು